ಮಹಿಳಾ ದಿನಾಚರಣೆ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಸಾಧಕರಿಗೆ ಸನ್ಮಾನ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉಡುಪಿ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲೇಖಕಿ ಪೂರ್ಣಿಮಾ ಸುರೇಶ್ ಮಹಿಳಾ ದಿನಾಚರಣೆ ಮಹತ್ವ ತಿಳಿಸಿದರು. ವೈದ್ಯ ಡಾ. ಕೋಮಲ್ ಆರೋಗ್ಯ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಹಿಳೆಯರಾದ ವಿದ್ಯಾ ಪೈ, ಮಾಯ ಕಾಮತ್, ಸುಧಾ ಪಾಂಡುರಂಗ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಪಂ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪ ಸುವರ್ಣ, ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯರಾದ ಭಾಗಿರತಿ ಮುಳ್ಳೇರಿ ಮತ್ತು ಗೀತಾಂಜಲಿ ಸುವರ್ಣ, ಮಹಿಳಾ ನಗರ ಸಭಾ ಸದಸ್ಯರು, ಹಾಗೂ ಎಲ್ಲ ಮಂಡಲದ ಅಧ್ಯಕ್ಷರು ಮತ್ತು ಪ್ರ.ಕಾರ್ಯದರ್ಶಿಯರು, ಪಕ್ಷದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಶೆಟ್ಟಿ ಮತ್ತು ಪ್ರಮೀಳ ಹರೀಶ್ ಕಾರ್ಯಕ್ರಮ ನಿರೂಪಿಸಿದರು.
ಮೋರ್ಚಾದ ಕಾರ್ಯದರ್ಶಿ ಅಶ್ವಿನಿ ಶೆಟ್ಟಿ ಮಹಿಳೆಯರಿಗೆ ಆಟೋಟ ಸ್ಪರ್ಧೆಯನ್ನು ಆಯೋಜಿಸಿದರು. ಮಹಿಳಾ ಮೋರ್ಚಾ ಸದಸ್ಯರಿಂದ ಮತ್ತು ದೊಡ್ಡಣ್ಣಗುಡ್ಡೆ ಮಹಿಳಾ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.