ನೇಣುಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ: ಕೊಲೆಯ ಶಂಕೆ

ಉಳ್ಳಾಲ: ಇಲ್ಲಿನ ಕುಂಪಲ ಆಶ್ರಯಕಾಲನಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಯುವತಿಯೊಬ್ಬಳ ಶವ ಇಂದು ಪತ್ತೆಯಾಗಿದೆ.

ಮೃತಳನ್ನು ಚಿತ್ತಪ್ರಸಾದ್ ಎಂಬವರ ಪುತ್ರಿ ಪ್ರೇಕ್ಷಾ(20) ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದ ಈಕೆ, ರಜೆ ಪಡೆದುಕೊಂಡು ಮನೆಯಲ್ಲೇ ಉಳಿದಿದ್ದಳು.

ತಾಯಿ ಅಂಗನವಾಡಿ ಕೆಲಸಕ್ಕೆ ಹೋಗಿದ್ದ ವೇಳೆ ಪ್ರೇಕ್ಷಾ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮಧ್ಯಾಹ್ನ ತಾಯಿ ಮನೆಗೆ ಊಟಕ್ಕೆ ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.