ಶಿವಮೊಗ್ಗದಲ್ಲಿ ದ. ಆಫ್ರಿಕಾ ರೂಪಾಂತರಿ ವೈರಸ್ ಪತ್ತೆ: ಜನತೆಯಲ್ಲಿ ಆತಂಕ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ದಕ್ಷಿಣ ಆಫ್ರಿಕಾದ ರೂಪಾಂತರಿ ಕೊರೊನಾ ವೈರಸ್ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಶುರುವಾಗಿದೆ.

ದುಬೈನಿಂದ ಶಿವಮೊಗ್ಗಕ್ಕೆ ಇತ್ತೀಚೆಗೆ ಬಂದಿದ್ದ 53 ವರ್ಷದ ವ್ಯಕ್ತಿಯಲ್ಲಿ ಈ ಸೋಂಕು ಪತ್ತೆಯಾಗಿದೆ. ಇವರು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆ ಬಳಿಕ ಅವರಲ್ಲಿ ಆಫ್ರಿಕಾದ ವೈರಸ್ ಕಾಣಿಸಿಕೊಂಡಿದೆ ಎಂದು ಶಿವಮೊಗ್ಗ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಈ ವ್ಯಕ್ತಿ 18 ದಿನಗಳ ಹಿಂದೆ ಕರ್ನಾಟಕಕ್ಕೆ ಬಂದಿದ್ದರು. ಆಗ ಇವರ ಸ್ಯಾಂಪಲ್ ಪರೀಕ್ಷೆ ನಡೆಸಿದ್ದು, ಯಾವುದೇ ರೋಗಲಕ್ಷಣ ಕಂಡುಬಂದಿರಲಿಲ್ಲ. ಆದರೆ ಈಗ ಏಕಾಏಕಿಯಾಗಿ ಅನಾರೋಗ್ಯ ಉಂಟಾಗಿದ್ದು, ಪರೀಕ್ಷೆ ವೇಳೆ ರೂಪಾಂತರಿ ವೈರಸ್ ಪತ್ತೆಯಾಗಿದೆ. ಹಾಗಾಗಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ತಿಳಿದುಬಂದಿದೆ.