ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕಿ ಆಸ್ಪತ್ರೆಯಲ್ಲಿ ಮೃತ್ಯು

ಸುಳ್ಯ: ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾಳೆ.

ಮೃತ ಬಾಲಕಿಯನ್ನು ದೇವಚಳ್ಳ ಗ್ರಾಮದ ಮಾವಿನಕಟ್ಟೆ ಈಶ್ವರ ಎಂಬವರ ಪುತ್ರಿ ಯಶಸ್ವಿನಿ(13) ಗುರುತಿಸಲಾಗಿದೆ. ಈಕೆ ಎಲಿಮಲೆ ಸರಕಾರಿ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ವಾರದ ಹಿಂದೆ ಇಲಿಪಾಷಾಣ ಸೇವಿಸಿದ್ದಳು.

ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯನ್ನು ಮನೆಯವರು ಸುಳ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಇಲಿ ಪಾಷಾಣ ಸೇವನೆಗೆ ಕಾರಣ ತಿಳಿದುಬಂದಿಲ್ಲ.