ಪೌರಕಾರ್ಮಿಕರ ಮೇಲಿನ ಹಲ್ಲೆ ಖಂಡನೀಯ: ಪ್ರಮೋದ್ ಮಧ್ವರಾಜ್

ಉಡುಪಿ: ಉಡುಪಿಯಲ್ಲಿ ಪೌರಕಾರ್ಮಿಕರ ಮೇಲೆ ನಡೆದಿರುವ ಹಲ್ಲೆ ಪ್ರಕರಣ ನಿಜಕ್ಕೂ ಆಘಾತಕಾರಿಯಾಗಿದ್ದು, ಈ ಘಟನೆಯನ್ನು ಖಂಡಿಸುತ್ತೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ನಗರದ ಸ್ವಚ್ಛತೆ ಕಾಪಾಡುವಲ್ಲಿ ಪೌರಕಾರ್ಮಿಕರ ಶ್ರಮವನ್ನು ಗೌರವಿಸಿ ಅವರಿಗೆ ಬೇಕಾಗಿರುವ ಸಂಪೂರ್ಣ ಭದ್ರತೆಯನ್ನು ನೀಡುವಂತೆ ಮತ್ತು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಪೌರಕಾರ್ಮಿಕರ ಮೇಲೆ ಹಲ್ಲೆ ನಡೆಸಿದವರ ಮೇಲೆ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.