ಬೆಂಗಳೂರು: ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದು ಸೂಕ್ತ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕೊರೊನಾ ಎರಡನೇ ಅಲೆ ಜೋರಾಗ್ತಿದೆ. ಜನ ಎಚ್ಚರಿಕೆಯಿಂದ ಇರಬೇಕು. ಕಾರ್ಯಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಾನೂ ಕೂಡಾ ಪ್ರತಿದಿನ ಐದಾರು ನೂರು ಕಿ.ಮೀ ಪ್ರಯಾಣ ಮಾಡ್ತಿದ್ದೇನೆ. ನೂರಾರು ಜನರ ಸಂಪರ್ಕದಲ್ಲಿ ಇದ್ದೇನೆ. ದೇವರ ದಯೆಯಿಂದ ಏನೂ ಅನಾಹುತ ಆಗಿಲ್ಲ. ಆದರೂ ಜನ ಎಚ್ಚರಿಕೆಯಿಂದ ಇರೋದು ಸೂಕ್ತ ಎಂದು ಹೇಳಿಕೆ ನೀಡಿದ್ದಾರೆ.