ಬೆಂಗಳೂರು: ರಾಜ್ಯದಲ್ಲಿ ಖಾಲಿ ಇದ್ದ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 17ರಂದು ಉಪಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ಪ್ರತಾಪ್ ಗೌಡ್ ಪಾಟೀಲ್ ರಾಜೀನಾಮೆಯಿಂದ ಮಸ್ಕಿ ವಿಧಾನಸಭಾ ಕ್ಷೇತ್ರ ತೆರವಾಗಿದ್ದರೆ, ಬೀದರ್ ನ ಬಸವಕಲ್ಯಾಣ ಕ್ಷೇತ್ರದ ಶಾಸಕ ಬಿ. ನಾರಾಯಣ ರಾವ್ ನಿಧನದಿಂದ ಕ್ಷೇತ್ರ ತೆರವಾಗಿತ್ತು. ಹಾಗೆ ಬಿಜೆಪಿ ಸಂಸದ ಸುರೇಶ್ ಅಂಗಡಿ ನಿಧನದಿಂದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರ ತೆರವಾಗಿತ್ತು.
ಏಪ್ರಿಲ್ 17ಕ್ಕೆ ಈ ಮೂರು ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ. ಆದರೆ, ಸಿಂಧಗಿ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕವನ್ನು ಆಯೋಗ ಘೋಷಣೆ ಮಾಡಿಲ್ಲ.