ಮಣಿಪಾಲ: ಕಳೆದ ಒಂದು ವಾರದಿಂದ ಮಣಿಪಾಲದ ಎಂಐಟಿ ಕಾಲೇಜಿನ ಕ್ಯಾಂಪಸ್ನಲ್ಲಿ ಕೊರೊನಾ ಪಾಸಿಟಿವ್ ಕೇಸ್ ಅಧಿಕ ಸಂಖ್ಯೆಯಲ್ಲಿ ಕಂಡುಬಂದಿದ್ದು, ಇದು ವಿದ್ಯಾರ್ಥಿಗಳ ಆತಂಕ ಹೆಚ್ಚಿಸಿದೆ. ಮಣಿಪಾಲ ಹಾಗೂ ಎಂಐಟಿ ಕ್ಯಾಂಪಸ್ನಲ್ಲಿ ಇಂದು ಸಂಜೆಯವರೆಗೆ ಒಟ್ಟು 106 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಯಲ್ಲಿ 5000 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಡಿಸಿ ಜಗದೀಶ್ ತಿಳಿಸಿದ್ದಾರೆ.
ಎಂಐಟಿಯಲ್ಲಿ ಇನ್ನು ಆಫ್ಲೈನ್ ಕ್ಲಾಸ್ಗಳು ನಡೆಯುವುದಿಲ್ಲ. ಕೇವಲ ಆನ್ಲೈನ್ ಕ್ಲಾಸ್ಗಳಿಗೆ ಮಾತ್ರ ಅವಕಾಶವಿರುತ್ತದೆ. ಪಾಸಿಟಿವ್ ಬಂದ ವಿದ್ಯಾರ್ಥಿಗಳಲ್ಲಿ ರೋಗದ ಲಕ್ಷಣಗಳಿಲ್ಲದ ಕಾರಣ ಎಲ್ಲರೂ ಹಾಸ್ಟೆಲ್ಗಳಲ್ಲೇ ಉಳಿಯಲಿದ್ದಾರೆ. ಇಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಕೋವಿಡ್ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಮಣಿಪಾಲದಲ್ಲಿರುವ ಅಂಗಡಿ-ಮುಂಗಟ್ಟುಗಳು ಹಾಗೂ ಇತರರು ಕೋವಿಡ್ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತೆ ಅವರು ಸೂಚಿಸಿದ್ದಾರೆ.