ಕಾಪು ಮಾರಿ ಪೂಜೆ: ಎರಡು ದಿನ ಮದ್ಯ ಮಾರಾಟ ನಿಷೇಧ

ಉಡುಪಿ: ಕಾಪು ತಾಲೂಕಿನ ಕಾಪು ಮೂರು ಮಾರಿಗುಡಿಗಳಲ್ಲಿ ಮಾರ್ಚ್ 23 ಮತ್ತು 24ರಂದು ಸುಗ್ಗಿ ಮಾರಿ ಪೂಜೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಬಾರ್ ಮತ್ತು ವೈನ್ ಶಾಪ್‌ಗಳು ತೆರೆದಿದ್ದಲ್ಲಿ, ಮದ್ಯಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕಾಪು ಠಾಣಾ ವ್ಯಾಪ್ತಿಯ ಕಾಪು ಪಡು, ಮೂಳೂರು, ಮಜೂರು ಗ್ರಾಮಗಳ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳ ಮದ್ಯ ಮಾರಾಟವನ್ನು ಮಾರ್ಚ್ 23 ರ ಬೆಳಿಗ್ಗೆ 6 ರಿಂದ ಮಾರ್ಚ್ 24ರ ರಾತ್ರಿ 12 ಗಂಟೆಯವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.