ಕಾರ್ಕಳ : ಪ್ರಜಾಪಿತ ಬ್ರಹ್ಮಾಕುಮಾರಿ ಈಶರೀಯ ವಿಶ್ವ ವಿದ್ಯಾಲಯದ ವತಿಯಿಂದ ಮಹಾಶಿವರಾತ್ರಿ ಹಬ್ಬದ ಸಲುವಾಗಿ ಮಾ.3 ರಂದು ಅಪರಾಹ್ನ 3 ರಿಂದ ಶಾಲಾ ಮಕ್ಕಳಿಗಾಗಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಹಾಗೂ ಸಾರ್ವಜನಿಕರಿಗಾಗಿ ಕಸದಿಂದ ರಸ ಸ್ಪರ್ಧೆಯನ್ನು ಆನೆಕೆರೆ ಸದ್ಯೋಜತಾ ಪಾರ್ಕಿನಲ್ಲಿ ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸೇವಾಕೇಂದ್ರದ ಸಂಚಾಲಕಿ ಬಿ. ಕೆ. ವಿಜಯಲಕ್ಷ್ಮೀ ತಿಳಿಸಿದ್ದಾರೆ.