ಎಸ್ಐ ಮೇಲೆ ಗುಂಡಿನ ದಾಳಿ: ಓರ್ವನ ಬಂಧನ

ವಿಟ್ಲ: ಇಲ್ಲಿನ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ಪೊಲೀಸ್ ಅಧಿಕಾರಿ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲು ಯತ್ನಿಸಿದ ದುಷ್ಕರ್ಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ವಿಟ್ಲ ಎಸ್ ಐ ವಿನೋದ್ ರೆಡ್ಡಿ ಮೇಲೆ ದುಷ್ಕರ್ಮಿಯಿಂದ ಗುಂಡಿನ ದಾಳಿ ನಡೆದಿದ್ದು, ಅವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ವಿನೋದ್ ರೆಡ್ಡಿ ಮತ್ತು ಸಿಬ್ಬಂದಿ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಕಾರಿನಲ್ಲಿದ್ದ ಬಂದ ದುಷ್ಕರ್ಮಿ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ತಕ್ಷಣವೇ ಅಲರ್ಟ್ ಆದ ಸಿಬ್ಬಂದಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.