ಪುಣೆ: ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ಇಂದು ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡ 329 ರನ್ಗಳ ಬೃಹತ್ ಮೊತ್ತ ಕಲೆ ಹಾಕಿದೆ.
ಶಿಖರ್ ಧವನ್ (67), ರಿಷಬ್ ಪಂತ್ (78), ಹಾರ್ದಿಕ್ ಪಾಂಡ್ಯ (64) ಅವರ ಸ್ಫೋಟಕ ಆಟದ ನೆರವಿನಿಂದ ಆಂಗ್ಲರಿಗೆ 330 ರನ್ಗಳ ಗುರಿ ನೀಡಿದೆ.
ಇಂಗ್ಲೆಂಡ್ ಪರ ಮಾರ್ಕ್ ವುಡ್ 3, ಆದಿಲ್ ರಶೀದ್ 2, ಸ್ಯಾಮ್ ಕರನ್, ರೀಸ್ ಟಾಪ್ಲೆ, ಮೊಯಿನ್ ಅಲಿ, ಲಿಯಾಮ್ ಲಿವಿಂಗ್ಸ್ಟೋನ್ ಹಾಗೂ ಬೆನ್ ಸ್ಟೋಕ್ಸ್ ತಲಾ ಒಂದು ವಿಕೆಟ್ ಪಡೆದಿದ್ದಾರೆ.
ಇಂಗ್ಲೆಂಡ್ಗೆ ಆರಂಭಿಕ ಆಘಾತ: ಇಂಗ್ಲೆಂಡ್ ಪರ ಬ್ಯಾಟಿಂಗ್ ಆರಂಭಿಸಿದ ಜೇಸನ್ ರಾಯ್ 14, ಜಾನಿ ಬೆಸ್ಟೊ 1 ರನ್ ಗಳಿಸಿ ಭುವನೇಶ್ವರ್ಗೆ ವಿಕೆಟ್ ಒಪ್ಪಿಸಿದ್ದಾರೆ.