ಕೊರೊನಾ ಹೆಚ್ಚಳ ಹಿನ್ನಲೆ: ಕಠಿಣ ನಿಯಮ ಜಾರಿಗೊಳಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಯಾವುದೇ ಲಾಕ್ ಡೌನ್, ನೈಟ್ ಕರ್ಫ್ಯೂ ಮೊರೆಹೋಗದೆ, ಕೆಲವು ಕಠಿಣ ನಿಯಮಗಳನ್ನು ಜಾರಿಗೊಳಿಸಲು ನಿರ್ಧರಿಸಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈ ಬಗ್ಗೆ ಮಾಹಿತಿ ನೀಡಿ, ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಇಲ್ಲ. ನೈಟ್ ಕರ್ಫ್ಯೂ ಸಹ ಜಾರಿಗೊಳಿಸುವುದಿಲ್ಲ. ಆದರೆ ಇಂದಿನಿಂದ (ಮಾ. 30) 15 ದಿನ ಧಾರ್ಮಿಕ ಕಾರ್ಯಕ್ರಮ, ಜಾತ್ರೆ, ಪ್ರತಿಭಟನೆ, ಸತ್ಯಾಗ್ರಹಗಳಿಗೆ ಅವಕಾಶ ಇಲ್ಲ ಎಂದರು.

ಅಪಾರ್ಟ್ ಮೆಂಟ್ ಗಳಲ್ಲಿ ಪಾರ್ಟಿ, ಜಿಮ್ ಮತ್ತು ಈಜುಕೋಳಗಳನ್ನು ನಿಷೇಧಿಲಾಗಿದೆ ಎಂದು ಸಿಎಂ ಹೇಳಿದರು.

ಮದುವೆ ಹಾಗೂ ಇತರೆ ಸಮಾರಂಭಗಳಲ್ಲಿ ಹೆಚ್ಚು ಜನ ಸೇರುವಂತಿಲ್ಲ. ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ ಎಂದಿದ್ದಾರೆ.