ಬಿಜೆಪಿ ಸಂಸದೆ, ಬಾಲಿವುಡ್ ನಟಿ ಕಿರಣ್ ಖೇರ್ ಗೆ ಬ್ಲಡ್ ಕ್ಯಾನ್ಸರ್

ಮುಂಬೈ: ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಅವರ ಪತ್ನಿ ಹಾಗೂ ಚಂಡೀಗಢ ಕ್ಷೇತ್ರದ ಬಿಜೆಪಿ ಸಂಸದೆ ಕಿರಣ್ ಖೇರ್ ಬ್ಲಡ್ ಕ್ಯಾನ್ಸರ್ ಗೆ ತುತ್ತಾಗಿದ್ದಾರೆ.

ಇಂದು ನಟ ಅನುಪಮ್ ಖೇರ್ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಈ ವಿಚಾರವನ್ನು ಖಚಿತಪಡಿಸಿದ್ದಾರೆ.

ತಮ್ಮ ಪತ್ನಿ ಬ್ಲಡ್ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿರುವುದನ್ನು ಹೇಳಿಕೊಂಡಿರುವ ಅವರು, ಆಕೆ ಈ ಯುದ್ಧದ ವಿರುದ್ಧ ಹೋರಾಡಿ ಜಯಶಾಲಿಯಾಗುತ್ತಾಳೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.