ಕೋವಿಡ್ ಎರಡನೇ ಅಲೆ ಹೆಚ್ಚಳ: 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ‌ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ  6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಕೊಂಡಿದ್ದು, 6 ರಿಂದ 9 ನೇ ತರಗತಿ ವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ‌ ಆದೇಶದವರೆಗೆ ಸ್ಥಗಿತಗೊಳಿಸಲಾಗುವುದು ಎಂದರು.

10ನೇ ತರಗತಿ ಹಾಗೂ ಪಿಯುಸಿ ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ತಿಳಿಸಿದ್ದಾರೆ.