ಉಡುಪಿ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ಉಡುಪಿ ಜಿಲ್ಲೆ ಇದರ ಜಿಲ್ಲಾ ಕಚೇರಿ ಉದ್ಘಾಟನಾ ಸಮಾರಂಭ ಏಪ್ರಿಲ್ 4ರ ಭಾನುವಾರದಂದು ಸಂಜೆ 3.30ಕ್ಕೆ ಆದಿಉಡುಪಿಯ ರೀಗಲ್ ನೆಕ್ಸ್ಟ್ ಕಮರ್ಷಿಯಲ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನಡೆಯಲಿದೆ.
ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ. ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಕರ್ನಾಟಕ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಗೋಕಾಕ್ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ಉಡುಪಿ ಜಿಲ್ಲಾಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ಕೆ. ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಉಡುಪಿ ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಹಿರಿಯ ಪತ್ರಕರ್ತ ಜನಾರ್ದನ್ ಕೊಡವೂರು, ಸುಮನಸಾ ಕೊಡವೂರು ಅಧ್ಯಕ್ಷ ಪ್ರಕಾಶ್ ಕೊಡವೂರು, ಶ್ರೀರಾಮ ಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಜಯರಾಮ ಅಂಬೆಕಲ್ಲು, ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ.
ಉಡುಪಿ ಹಾಲುಮತ ಮಹಾಸಭಾದ ಸಿದ್ದಪ್ಪ ಎಚ್. ಐಹೊಳೆ, ಕನಕದಾಸ ಸಮಾಜ ಸೇವಾ ಸಂಘ ಜಿಲ್ಲಾಧ್ಯಕ್ಷ ಹನುಮಂತ ಐಹೊಳೆ, ಕರಾವಳಿ ಕುರುಬರ ಸಂಘದ ಮಂಜುನಾಥ್ ನೋಟಗಾರ ಭಾಗವಹಿಸುವರು ಎಂದು ಪ್ರಧಾನ ಕಾರ್ಯದರ್ಶಿ ಮಹೇಶ್ ಗುಂಡಿಬೈಲು ತಿಳಿಸಿದ್ದಾರೆ.