ಬೈಂದೂರು: ಬಿಜೆಪಿ ಬೈಂದೂರು ಮಂಡಲದ ವಂಡ್ಸೆ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾ ಸಭೆಯು ಚಿತ್ತೂರಿನ ಮೂಕಾಂಬಿಕಾ ಸಭಾಗೃಹದಲ್ಲಿ ನಡೆಯಿತು.
ಸಭೆಯನ್ನು ಉದ್ಘಾಟಿಸಿ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮಾತನಾಡಿ, ಮಹಿಳೆಯರು ಸಂಘಟಿತರಾದಲ್ಲಿ ಮಾತ್ರ ಸಬಲೀಕರಣ ಸಾಧ್ಯ. ಆದ್ದರಿಂದ ಮಹಿಳೆಯರು ಪಕ್ಷ ಸಂಘಟನೆಗೆ ಹೆಚ್ಚು ಗಮನ ಕೊಡಬೇಕು ಎಂದು ಹೇಳಿದರು.
ಹಾಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧಿಸಿದ ವಂಡ್ಸೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಬಿಜೆಪಿ ಬೆಂಬಲಿತ ಎಲ್ಲಾ ಮಹಿಳಾ ಸದಸ್ಯರನ್ನು ಅಭಿನಂದಿಲಾಯಿತು.
ವೇದಿಕೆಯಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಮಾಲತಿ ನಾಯ್ಕ್, ಕುಂದಾಪುರ ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಇಂದಿರಾ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ್ ಉಪಸ್ಥಿತರಿದ್ದರು.
ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ದೀಪಾ ಶೆಟ್ಟಿ ಸ್ವಾಗತಿಸಿದರು, ಶಾಂತಿ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು.
ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಅನಿತಾ ಮರವಂತೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಜಯಂತಿ ಪೂಜಾರಿ ವಂದಿಸಿದರು. ಸಭೆಯಲ್ಲಿ ನೂತನ ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಹಾಗೂ ಶಕ್ತಿ ಕೇಂದ್ರದ ಅಧ್ಯಕ್ಷರನ್ನು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗರು ಘೋಷಣೆ ಮಾಡಿದರು.












