ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಯನ್ನು ಒದಗಿಸಲು ಅಗತ್ಯವಿರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಏಪ್ರಿಲ್ 7ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನರ ಕೊಠಡಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ವೈದ್ಯರು/ ತಜ್ಞರ-10 ಹುದ್ದೆಗೆ (ವೇತನ-75000) ವಿದ್ಯಾರ್ಹತೆ- ಎಂ.ಬಿ.ಬಿ.ಎಸ್/ ತಜ್ಞತೆ (ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದಪದವಿ ಆಗಿರಬೇಕು) ಮತ್ತು ಶುಶ್ರೂಷಕರ -20 ಹುದ್ದೆಗೆ (ವೇತನ -25000) ವಿದ್ಯಾರ್ಹತೆ- ಕರ್ನಾಟಕ ಸರ್ಕಾರದ ನೊಂದಾಯಿತ ಸಂಸ್ಥೆಯಿಂದ ಜಿ.ಎನ್.ಎಂ/ ಬಿ.ಎಸ್ಸಿ ನರ್ಸಿಂಗ್ ಪದವಿ ಪಡೆದಿರಬೇಕು.
ಮೇಲ್ಕಂಡ ಹುದ್ದೆಗಳ ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿಗಳನ್ನು ನೇರ ಸಂದರ್ಶನಕ್ಕೆ ಹಾಜರಾಗುವಾಗ ತರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸರ್ಜನ್, ಮೊ.ನಂ: 94498 43181 ಅಥವಾ 0820 2530 333 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.