ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿ: ಸಿಎಂ ಯಡಿಯೂರಪ್ಪ

ಬೆಳಗಾವಿ: ನೌಕರರು ಮುಷ್ಕರ ನಿಲ್ಲಿಸಿ ಮಾತುಕತೆಗೆ ಬರಬೇಕು. ನಾನು ಯಾರ ಜೊತೆಗೆ ಬೇಕಾದರೂ ಮಾತನಾಡಲು ಸಿದ್ಧವಿದ್ದೇನೆ. ನೌಕರರು ಹಟ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನೌಕರರ 9 ಬೇಡಿಕೆಗಳ ಪೈಕಿ ಎಂಟನ್ನು ಈಡೇರಿಸಿದ್ದೇವೆ. ದುರುದ್ದೇಶದಿಂದ ಹಟ ಮಾಡುವುದು ಸರಿಯಲ್ಲ ಎಂದರು.

ಸಾರಿಗೆ ನೌಕರರ ಬಳಿ ಸಾಕಷ್ಟು ಮನವಿ ಮಾಡಲಾಗಿತ್ತು. ಆದರೂ ಮುಷ್ಕರ ನಡೆಸುತ್ತಿದ್ದು, ಇದರಿಂದ ಜನರಿಗೆ ತೊಂದರೆ ಆಗುತ್ತಿದೆ. ಹೀಗಾಗಿ, ಪರಿಸ್ಥಿತಿ ನೋಡಿಕೊಂಡು ಎಸ್ಮಾ ಜಾರಿ ಬಗ್ಗೆ ಚಿಂತಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.