ಬೆಂಗಳೂರು: ಮೇ 2ರ ನಂತರ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸುವುದು ಖಚಿತ. ಪಕ್ಷ ಉಳಿಯಬೇಕು ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆಯಲೇಬೇಕು. ಇಲ್ಲದಿದ್ದರೆ ಪಕ್ಷ ಉಳಿಯಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ಅಪ್ಪ (ಯಡಿಯೂರಪ್ಪ), ಮಗನ (ವಿಜಯೇಂದ್ರ) ನಿಜಬಣ್ಣ ಬಯಲಾಗಲಿದೆ. ವಿಜಯೇಂದ್ರ ಎಷ್ಟು ಲೂಟಿ ಮಾಡಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಗುಡುಗಿದರು.
ಫೆಡರಲ್ ಬ್ಯಾಂಕ್ ವ್ಯವಹಾರದಲ್ಲಿ ವಿಜಯೇಂದ್ರ ಅವರನ್ನು ಜಾರಿ ನಿರ್ದೇಶನಾಲಯದವರು (ಇ.ಡಿ) ಕರೆದುಕೊಂಡು ಹೋಗಿಲ್ಲ ಎಂದು ಹೇಳಲಿ. ನಾನು ಅವರಿಗೆ ಸವಾಲು ಹಾಕ್ತೇನೆ ಎಂದರು.
ಯಾರೋ ಒಬ್ಬರು ಚಿಲ್ಲರೆ ಪಲ್ಲರೆಗಳ ಕೈಯಲ್ಲಿ ಮಾತನಾಡಿಸುತ್ತಾರೆ. ತಾಕತ್ತಿದ್ದರೆ ನನ್ನ ಬಗ್ಗೆ ಅಪ್ಪ – ಮಗ ಮಾತನಾಡಲಿ’ ಎಂದು ಸವಾಲು ಹಾಕಿದರು.