ಹೆಬ್ರಿ: ಇಲ್ಲಿನ ಚಾರ ಬಸ್ ನಿಲ್ದಾಣದಲ್ಲಿ ಯುವಕನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.
ಹೆಬ್ರಿಯ ಚಾರಗ್ರಾಮದ ಯುವಕ ಪ್ರಶಾಂತ್ ದೇವಾಡಿಗ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಒಂದು ವರ್ಷದ ಹಿಂದೆ ವಿವಾಹವಾಗಿದ್ದು, ಹೆಬ್ರಿಯ ಖಾಸಗಿ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದನು. ಈತನ ಪತ್ನಿ ಕೂಡ ಹೆಬ್ರಿಯ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
ಕೌಟುಂಬಿಕ ಕಲಹದಿಂದ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.