ನವದೆಹಲಿ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ರಾಜ್ಯ ಸರ್ಕಾರವು ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಆದೇಶ ಪ್ರಕಟಿಸಿದ್ದು, 5ನೇ ತರಗತಿ, 8ನೇ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯದೆಯೇ ಮುಂದಿನ ಹಂತಕ್ಕೆ ತೇರ್ಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
12ನೇ ತರಗತಿಯ ಪಿಎಸ್ಇಬಿ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಪರೀಕ್ಷೆ ನಡೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಪ್ರಕಟಿಸಿದೆ.
ಹರಿಯಾಣ: 10ನೇ ತರಗತಿ ಪರೀಕ್ಷೆ ರದ್ದು:
ಪಂಜಾಬ್ ಬಳಿಕ ಇದೀಗ ಹರಿಯಾಣದ ಸರ್ಕಾರ ಕೂಡ 10ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿದೆ. ಹಾಗೂ 12 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನೆಲೆ ಇಂದು ಆದೇಶ ಹೊರಡಿಸಿರುವ ಹರಿಯಾಣದ ಸರ್ಕಾರ, ಪ್ರಸಕ್ತ ಶೈಕ್ಷಣಿಕ ವರ್ಷದ 10ನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು, 12 ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ.