ಉಡುಪಿ, ಮಣಿಪಾಲ ಸಹಿತ ರಾಜ್ಯದ ಎಂಟು ನಗರಗಳಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ: ಸಿಎಂ

ಬೆಂಗಳೂರು: ಉಡುಪಿ, ಮಣಿಪಾಲ ಸೇರಿದಂತೆ ರಾಜ್ಯದ ಎಂಟು ನಗರಗಳಲ್ಲಿ‌ ನಿಗದಿಯಂತೆ ಏ. 20ರ ವರೆಗೆ ನೈಟ್ ಕರ್ಪ್ಯೂ ಮುಂದುವರಿಸುತ್ತೇವೆ. ಉಳಿದಂತೆ ಏ. 20ರ ಬಳಿಕ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿಯ ಬಗ್ಗೆ ಎಲ್ಲರ ಅಭಿಪ್ರಾಯ ಪಡೆದು ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಇಂದು ಸಿಎಂ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಹಾಗೂ ಆರೋಗ್ಯ ಸಚಿವರ ಜತೆ ತುರ್ತು ಸಭೆ ನಡೆಸಿದರು.

ಕೋವಿಡ್ ಮಹಾಮಾರಿ ಬೆಂಗಳೂರಿನಲ್ಲಿ ಮಿತಿ ಮೀರುತ್ತಿದೆ. ಈ ನಿಟ್ಟಿನಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ವರದಿಯ ಬಗ್ಗೆ ಚರ್ಚೆ ನಡೆಸಿದ್ದೇವೆ. ಸದ್ಯ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈಗಾಗಲೇ 8 ನಗರಗಳಲ್ಲಿ ಹೊರಡಿಸಲಾಗಿರುವ ನೈಟ್ ಕರ್ಪ್ಯೂ ಅನ್ನು ಏ. 20ರ ವರೆಗೆ ಮುಂದುವರಿಸಲಾಗುವುದು.

ಬಳಿಕ ಮತ್ತೆ ಸಭೆ ನಡೆಸಿ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತೇವೆ. ಪ್ರಧಾನಿ ಮೋದಿ ಅವರು ಯಾವ ಸಲಹೆ ಕೊಡುತ್ತಾರೆ. ವಿಪಕ್ಷಗಳ ಏನು ಸಲಹೆಯನ್ನು ಕೊಡುತ್ತಾರೆ ಎನ್ನುವುದನ್ನು ಅವಲೋಕಿಸಿಕೊಂಡು ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.