ಮಂಗಳೂರು: ತುಳು ಚಿತ್ರರಂಗದ ಯುವ ನಿರ್ದೇಶಕ ರಘು ಶೆಟ್ಟಿ (39) ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು.
ಮೂಡುಬಿದಿರೆಯ ರಘು ಶೆಟ್ಟಿ ಶನಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ರಘು ಶೆಟ್ಟಿ ಅವರು ‘ಅರ್ಜುನ್ ವೆಡ್ಸ್ ಅಮೃತ’ ಎಂಬ ತುಳು ಚಿತ್ರವನ್ನು ನಿರ್ದೇಶಿಸಿದ್ದರು.