ಡೆಲ್ಲಿ ಕ್ಯಾಪಿಟಲ್ಸ್ ಗೆ ಆಘಾತ: ಅರ್ಧದಲ್ಲೇ ಐಪಿಎಲ್ ತೊರೆದ ಪ್ರಮುಖ ಸ್ಪಿನ್ನರ್

ಚೆನ್ನೈ: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಸೂಪರ್ ಓವರ್ ನಲ್ಲಿ ರೋಚಕ ಗೆಲುವು ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅರ್ಧದಲ್ಲಿ ಐಪಿಎಲ್ ತೊರೆಯಲು ನಿರ್ಧರಿಸಿದ್ದಾರೆ.

ಕೋವಿಡ್ 19 ಸೋಂಕಿನ ವಿರುದ್ಧದ ಹೋರಾಟದಲ್ಲಿ ಕುಟುಂಬದ ಜೊತೆ ಕೈಜೋಡಿಸುವ ಸಲುವಾಗಿ ಅಶ್ವಿನ್ ಈ ನಿರ್ಧಾರಕ್ಕೆ ಬಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಶ್ವಿನ್, ನಾಳೆಯಿಂದ ನಾನು ಈ ವರ್ಷದ ಐಪಿಎಲ್ ನಲ್ಲಿ ಆಡುತ್ತಿಲ್ಲ. ನನ್ನ ಕುಟುಂಬ ಕೋವಿಡ್ ವಿರುದ್ಧ ಹೋರಾಡುತ್ತಿದೆ. ಈ ಕಷ್ಟದ ಸಮಯದಲ್ಲಿ ನಾನು ಅವರೊಂದಿಗೆ ಇರಬೇಕಾಗಿದೆ. ಒಂದು ವೇಳೆ ಎಲ್ಲವೂ ಸರಿಯಾದರೆ ಮತ್ತೆ ಆಡಲು ಬರುತ್ತೇನೆ ಎಂದು ತಿಳಿಸಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ಆಡಿದ ಎಲ್ಲಾ ಐದು ಪಂದ್ಯಗಳಲ್ಲಿ ಅಶ್ವಿನ್ ಕಣಕ್ಕಿಳಿದಿದ್ದರು. ಒಂದು ವಿಕೆಟ್ ಪಡೆದಿರುವ ಅಶ್ವಿನ್ ಏಳರ ಸರಾಸರಿಯಲ್ಲಿ ರನ್ ನೀಡಿದ್ದಾರೆ.