ನವದೆಹಲಿ: ಭಾರತದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ದೇಶದಲ್ಲಿಂದು 3,23,144 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,76,36,307ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2771 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,97,894ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 28,82,204ಕ್ಕೆ ಏರಿಕೆಯಾಗಿದೆ.
ಈ ನಡುವೆ ಕಳೆದ 24 ಗಂಟೆಗಳಲ್ಲಿ 2,51,827 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 1,45,56,209ಕ್ಕೆ ತಲುಪಿದೆ. ಹಾಗೆ ಭಾರತದಲ್ಲಿ ಒಂದೇ ದಿನ 16,58,700 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈವರೆಗೂ 28,09,79,877 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.