ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಶ್ವವಾಣಿ ಪತ್ರಿಕೆಯ ಮಂಗಳೂರು ವಿಭಾಗ ಮುಖ್ಯಸ್ಥ ಜಿತೇಂದ್ರ ಕುಂದೇಶ್ವರ ಅವರು ಆಯ್ಕೆಯಾಗಿದ್ದಾರೆ.
ಮಂಗಳೂರಿನ ಪತ್ರಿಕಾ ಭವನದಲ್ಲಿ ಎ. 27ರಂದು ನಡೆದ ಚುನಾವಣೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ. ಕುಂದೇಶ್ವರ ದೇವಸ್ಥಾನದ ಆನುವಂಶಿಕ ಅರ್ಚಕರು ಹಾಗೂ ಧರ್ಮದರ್ಶಿಯೂ ಆಗಿರುವ ಜಿತೇಂದ್ರ ಕುಂದೇಶ್ವರ ಕಾರ್ಕಳ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ದ.ಕ. ಜಿಲ್ಲಾ ಪತ್ರಕರ್ತರ ಸಂಘದ ಜಿಲ್ಲಾ ಕೇಂದ್ರ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.