ಉಡುಪಿ: ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಪರಿಷ್ಕರಿಸಲಾಗಿದ್ದು, ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್ . ಮಂಜುನಾಥ್ ಪ್ರಸಾದ್ ಈ ಕೆಳಕಂಡಂತೆ ಆದೇಶ ಹೊರಡಿಸಿದ್ದಾರೆ.
ಅದರಂತೆ ಪ್ರಸ್ತುತ ಮಾರುಕಟ್ಟೆಯಲ್ಲಿ ಆಗುತ್ತಿರುವ ಜನಸಂದಣಿ ಹಾಗೂ ನೂಕು ನುಗ್ಗಲುಗಳನ್ನು ನಿಯಂತ್ರಿಸುವ ಉದ್ದೇಶದಿಂದ ಇದೇ ಮೇ 2ರಿಂದ ಅನ್ವಯವಾಗುವಂತೆ ಎಲ್ಲಾ ರೀತಿಯ ಸಂತೆ, ವಾರದ ಸಂತೆಗಳನ್ನು ನಿಷೇಧಿಸಲಾಗಿದೆ. ಇದರ ಬದಲಿಗೆ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಹಾಮ್ ಕಾಮ್ಸ್, ಎಲ್ಲಾ ಹಾಲಿನ ಬೂತುಗಳು, ತಳ್ಳುವಗಾಡಿ ಮೂಲಕ ಹಣ್ಣು ತರಕಾರಿಗಳನ್ನು ಮಾರುಕಟ್ಟೆ ಬೆಲೆಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.
ಹಾಗೆ ಎಪಿಎಂಸಿ ಹಾಗೂ ದಿನಸಿ ಅಂಗಡಿಗಳನ್ನು ಬೆಳಿಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ.