ಅಹಮದಾಬಾದ್: ಕೋಲ್ಕತ್ತ ನೈಟ್ ರೈಡರ್ಸ್ ತಂಡದ ವರುಣ್ ಚಕ್ರವರ್ತಿ ಮತ್ತು ಸಂದೀಪ್ ವಾರಿಯರ್ ಅವರಿಗೆ ಕೋವಿಡ್–19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಹೀಗಾಗಿ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು (ಸೋಮವಾರ) ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ನಡುವಿನ ಪಂದ್ಯವನ್ನು ಮುಂದೂಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿದುಬಂದಿದೆ.