ಉಡುಪಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಎರಡನೇ ಅಲೆ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಣ ಮಾಡಲು ಸೂಕ್ತ ಪೂರ್ವ ತಯಾರಿಯೊಂದಿಗೆ ಲಾಕ್ ಡೌನ್ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಸಾಮಾಜಿಕ ಕಾರ್ಯಕರ್ತ ರಾಕೇಶ್ ಬಿರ್ತಿ ಅಭಿಪ್ರಾಯಪಟ್ಟಿದ್ದಾರೆ.
ಸದ್ಯ ಕೊರೊನಾ ಚೈನ್ ಬ್ರೇಕ್ ಮಾಡುವುದು ಅಗತ್ಯವಾಗಿದ್ದು, ಕೋವಿಡ್ ಹರಡುವಿಕೆ ಮತ್ತಷ್ಟು ಹೆಚ್ಚಿದರೆ ಸರಕಾರಕ್ಕೂ ಅದನ್ನು ನಿಭಾಯಿಸಲು ಕಷ್ಟವಾಗಬಹುದು. ಹೀಗಾಗಿ ದೇಶದ ಜನರ ಪ್ರಾಣ ಉಳಿಸುವ ಕಾರ್ಯ ತುರ್ತಾಗಿ ಆಗಬೇಕಿದ್ದು, ಈ ಮಹತ್ತರ ಜವಾಬ್ದಾರಿ ಸರ್ಕಾರದ ಮೇಲಿದೆ. ಆದ್ದರಿಂದ ಪೂರ್ವ ತಯಾರಿಯೊಂದಿಗೆ ದೇಶದಲ್ಲಿ ಮತ್ತೊಮ್ಮೆ ಸಂಪೂರ್ಣ ಲಾಕ್ ಡೌನ್ ಆಗಬೇಕಾದ ಅಗತ್ಯತೆ ಇದೆ ಎಂದು ಅವರು ಹೇಳಿದ್ದಾರೆ.