ಸಂಕಷ್ಟದಲ್ಲಿರುವ ಕಲಾವಿದರು, ಕಾರ್ಮಿಕರಿಗೆ ನಟ ಉಪೇಂದ್ರರಿಂದ ನೆರವು

ಬೆಂಗಳೂರು: ಕೋವಿಡ್-19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಕನ್ನಡ ಚಲನಚಿತ್ರರಂಗದ ಸಾವಿರಾರು ಕಾರ್ಮಿಕರು ಹಾಗೂ ಕಲಾವಿದರು ಕೆಲಸವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ನಟ ಉಪೇಂದ್ರ ನೆರವಿನ ಹಸ್ತ ಚಾಚಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಉಪ್ಪಿ, ‘ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೆ ಕೋವಿಡ್ ಹೊಡೆತಕ್ಕೆ ತತ್ತರಿಸಿ ಹೋಗಿದ್ದಾರೆ. ಈ ಕಾರಣ, ಒಕ್ಕೂಟದ ಎಲ್ಲಾ ಸಂಘಗಳ ಸುಮಾರು ಮೂರು ಸಾವಿರ ಕುಟುಂಬಕ್ಕೆ ಅಭಿಮಾನಿಗಳ ಆಶೀರ್ವಾದದಿಂದ ದಿನಸಿ ಕಿಟ್ ನೀಡಲು ನಿರ್ಧರಿಸಿದ್ದೇವೆ’ ಎಂದು ಹೇಳಿದ್ದಾರೆ. ವಿತರಣೆ ಬಗ್ಗೆ ತಮ್ಮ ತಮ್ಮ ಸಂಘದ ಮುಖ್ಯಸ್ಥರನ್ನು ಸಂಪರ್ಕಿಸಿ ಎಂದು ಹೇಳಿದ್ದಾರೆ.

ಸಂಕಷ್ಟದಲ್ಲಿರುವ ಕಲಾವಿದರು, ಕಾರ್ಮಿಕರಿಗೆ ನೆರವಾಗುವ ಮೂಲಕ ಉಪ್ಪಿ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ.