ಉಡುಪಿ: ಇಂದು 1084 ಮಂದಿಗೆ ಕೊರೊನಾ ಪಾಸಿಟಿವ್; 787 ಮಂದಿ ಡಿಸ್ಚಾರ್ಜ್, 3 ಮಂದಿ ಮೃತ್ಯು

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದ್ದು, ಮಂಗಳವಾರ ಜಿಲ್ಲೆಯಲ್ಲಿ 1084 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 6876ಕ್ಕೆ ಏರಿಕೆಯಾಗಿದೆ.

ಉಡುಪಿ ತಾಲ್ಲೂಕಿನಲ್ಲಿ 519, ಕುಂದಾಪುರ 388, ಕಾರ್ಕಳ 169 ಹಾಗೂ ಹೊರ ಜಿಲ್ಲೆಯ 8 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಮೇ 10ರಂದು 3094 ಮಂದಿಯನ್ನು ಕೊರೊನಾ ಪರೀಕ್ಷೆ ಒಳಪಡಿಸಲಾಗಿದೆ. 787 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 3 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಉಡುಪಿ ತಾಲೂಕಿನ 48 ವರ್ಷದ ಮಹಿಳೆ ಹಾಗೂ 73 ಕುಂದಾಪುರ ತಾಲೂಕಿನ 67 ಮತ್ತು 72 ವರ್ಷದ ವ್ಯಕ್ತಿಗಳಿಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 534106 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 41817 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ವರೆಗೆ ಜಿಲ್ಲೆಯಲ್ಲಿ 34702 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ  ಜಿಲ್ಲೆಯಲ್ಲಿ 239 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.