ಬೆಂಗಳೂರು: ಹಿರಿಯ ಪತ್ರಕರ್ತ, ಸಿಎಂ
ಮಾಧ್ಯಮ ಸಲಹೆಗಾರರಾಗಿದ್ದ ಮಹದೇವ್ ಪ್ರಕಾಶ್ ಅವರು ಕೋವಿಡ್ನಿಂದ ಇಂದು ಮೃತಪಟ್ಟಿದ್ದಾರೆ.
ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಕೋವಿಡ್ಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
ಸಿಎಂ ಸಂತಾಪ:
ಖ್ಯಾತ ಲೇಖಕ, ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಯಿತು. ನನ್ನ ಮಾಧ್ಯಮ ಸಲಹೆಗಾರರಾಗಿಯೂ ಅವರು ಕೆಲಸ ಮಾಡಿದ್ದರು. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ. ಎಂದು ಸಿಎಂ ಯಡಿಯೂರಪ್ಪ ಅವರು ಟ್ವೀಟ್ ನಲ್ಲಿ ಸಂತಾಪ ಸೂಚಿಸಿದ್ದಾರೆ.