ಉಡುಪಿ: ಕೊರೊನಾ ಸೋಂಕಿತರ ಮನೆ ಸೀಲ್ ಡೌನ್ ಮಾಡುವ ಪ್ರಕ್ರಿಯೆ ಮತ್ತೆ ಆರಂಭ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಸೋಂಕು ದೃಢಪಟ್ಟವರು ಹಾಗೂ ಅವರ ಮನೆಯವರು ಹೊರಗಡೆ ಓಡಾಡುತ್ತಿರುವ ದೂರುಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಡಳಿತ ಕೊರೊನಾ ಪಾಸಿಟಿವ್ ಬಂದಂತಹ ವ್ಯಕ್ತಿಗಳ ಮನೆಯನ್ನು ಸೀಲ್ ಡೌನ್ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದೆ.

ಸ್ವತಃ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ನಗರದಲ್ಲಿ ಕೊರೊನಾ ಸೋಂಕು ದೃಢಪಟ್ಟ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ತೆರಳಿ ಮನೆಗಳನ್ನು ಸೀಲ್ ಡೌನ್ ಮಾಡುವ ಪ್ರಕ್ರಿಯೆಯನ್ನು ಜಾರಿಗೊಳಿಸುತ್ತಿದ್ದಾರೆ. ಅದರೊಂದಿಗೆ ಮನೆಯವರಿಗೆ ಧೈರ್ಯ ತುಂಬಿ, ಕೋವಿಡ್ ಬಗ್ಗೆ ಜಾಗೃತಿಯನ್ನು ಮೂಡಿಸುತ್ತಿದ್ದಾರೆ.