ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯಶಸ್ಸು ಎರಡನೇ ಅವಧಿಯ ಸಂಭ್ರಮಾಚರಣೆಯ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ಬ್ಲಡ್ ಬ್ಯಾಂಕ್ ನಲ್ಲಿ ಇಂದು ಹಮ್ಮಿಕೊಳ್ಳಲಾಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ರಕ್ತದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ.
ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಕಾಪು ಮಹಿಳಾ ಮೋರ್ಚಾದ ಅಧ್ಯಕ್ಷ ಸುಮಾ ಶೆಟ್ಟಿ, ನಗರ ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆಪತ್ಬಾಂದವ ಸತೀಶ್ ಸಾಲ್ಯಾನ್, ಹಿಂದುಳಿದ ಮೋರ್ಚಾದ ಅಧ್ಯಕ್ಷ ವಿನಯ ಕಲ್ಮಾಡಿ, ನಗರ ಕಾರ್ಯದರ್ಶಿ ದಯಶಿನಿ, ಮಹಿಳಾ ಮೋರ್ಚಾದ ಉಪಾಧ್ಯಕ್ಷರು, ಕಾರ್ಯದರ್ಶಿ, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು.