ಉಡುಪಿ: ಇಂದಿನ ಕೊರೊನಾ ಪ್ರಕರಣಗಳ ವಿವರ ಇಂತಿವೆ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆ ಹಾದಿಯಲ್ಲಿ ಸಾಗುತ್ತಿದ್ದು, ಇಂದು (ಮೇ 31)  519 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಉಡುಪಿ ತಾಲೂಕಿನಲ್ಲಿ 231, ಕುಂದಾಪುರ ತಾಲೂಕಿನಲ್ಲಿ 174, ಕಾರ್ಕಳ ತಾಲೂಕಿನಲ್ಲಿ‌ 113 ಹಾಗೂ ಹೊರ ಜಿಲ್ಲೆಯ ಓರ್ವನಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 5092 ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಕೂಡ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಉಡುಪಿ ತಾಲೂಕಿನ 78 ವರ್ಷದ ವೃದ್ಧೆ, 72 ವರ್ಷದ ವೃದ್ಧ, 49 ವರ್ಷದ ವ್ಯಕ್ತಿ ಹಾಗೂ ಕಾರ್ಕಳ ತಾಲೂಕಿನ 89 ವೃದ್ದರೊಬ್ಬರು ಕೋವಿಡ್ ನಿಂದ ಅಸುನೀಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 333 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಮೇ 30ರಂದು ಜಿಲ್ಲೆಯಲ್ಲಿ 765 ಮಂದಿ ಸೋಂಕಿತರು ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಆ ಮೂಲಕ ಕೋವಿಡ್ ಎರಡನೇ ಅಲೆಯಲ್ಲಿ ಈವರೆಗೆ ಒಟ್ಟು 29881 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 224228 ಮಂದಿಯನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಿದ್ದು, ಈ ಪೈಕಿ 35116 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಬ್ಲ್ಯಾಕ್ ಫಂಗಸ್ ವಿವರ:
ಇಂದು ಜಿಲ್ಲೆಯ ಕುಂದಾಪುರ ತಾಲೂಕಿನ ಓರ್ವನಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು, ಸದ್ಯ ಜಿಲ್ಲೆಯಲ್ಲಿ 11 ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿಯಲ್ಲಿ 3, ಕುಂದಾಪುರದಲ್ಲಿ 3 ಹಾಗೂ ಹೊರ ಜಿಲ್ಲೆಯ 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಓರ್ವನನ್ನು ಬೇರೆ ಜಿಲ್ಲೆಗೆ ಶಿಫ್ಟ್ ಮಾಡಲಾಗಿದೆ. ಉಡುಪಿ ತಾಲೂಕಿನ ಓರ್ವ ವ್ಯಕ್ತಿ ಈಗಾಗಲೇ ಬ್ಲ್ಯಾಕ್ ಫಂಗಸ್ ನಿಂದ ಮೃತಪಟ್ಟಿದ್ದಾರೆ.