ಬೆಂಗಳೂರು: ಅಪರಿಚಿತ ವ್ಯಕ್ತಿಯಿಂದ ಮೊಬೈಲ್ಗೆ ಬಂದಿದ್ದ ಲಿಂಕ್ ಕ್ಲಿಕ್ ಮಾಡಿದ ಮಹಿಳೆಯೊಬ್ಬರು ತಮ್ಮ ಬ್ಯಾಂಕ್ ಖಾತೆಯಿಂದ ₹ 1.02 ಲಕ್ಷ ಹಣ ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ..
ಹಣ ಕಳೆದುಕೊಂಡ ಮಹಿಳೆ ಬಳ್ಳಾರಿ ರಸ್ತೆಯ ನಿವಾಸಿಯಾಗಿದ್ದು, ಈ ಬಗ್ಗೆ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
ಮಹಿಳೆಗೆ ಕರೆ ಮಾಡಿ ಏಕಾಏಕಿ ಕರೆ ಕಡಿತಗೊಳಿಸಿದ್ದ ವ್ಯಕ್ತಿಯೊಬ್ಬರು, ಸಂದೇಶದ ಮೂಲಕ ಲಿಂಕ್ ಕಳುಹಿಸಿದ್ದರು. ಅದು ಏನಿರಬಹುದೆಂಬ ಕುತೂಹಲದೊಂದಿಗೆ ಮಹಿಳೆ ಲಿಂಕ್ ಮೇಲೆ ಕ್ಲಿಕ್ ಮಾಡಿದ್ದರು. ಅದಾದ ಕೆಲ ಕ್ಷಣಗಳಲ್ಲೇ ಅವರ ಬ್ಯಾಂಕ್ ಖಾತೆಯಿಂದ ₹ 1.02 ಲಕ್ಷ ಕಡಿತವಾಗಿದೆ ಎಂದು ತಿಳಿದುಬಂದಿದೆ.