ಉಡುಪಿ: 50ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ಜೂನ್ 2ರಿಂದ ಕಂಪ್ಲೀಟ್ ಲಾಕ್ ಡೌನ್ ಘೋಷಿಸಿರುವ ಜಿಲ್ಲೆಯ 35 ಗ್ರಾಮ ಪಂಚಾಯತ್ ಗಳಲ್ಲಿ ಸೋಮವಾರ (ಜೂನ್ 7) ಒಂದು ದಿನ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಕುಂದಾಪುರದಲ್ಲಿ ಹೇಳಿಕೆ ನೀಡಿದ್ದಾರೆ.
ಜೂನ್ 2ರಿಂದ ಐದು ದಿನಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಘೋಷಿಸಿರುವ ಗ್ರಾಪಂಗಳಲ್ಲಿ ಕೋವಿಡ್ ಪ್ರಕರಣಗಳು ಇಳಿಕೆಯಾಗಿವೆ. ಜಿಲ್ಲಾಡಳಿತದ ಸೀಲ್ ಡೌನ್ ಪ್ರಕ್ರಿಯೆ ಪರಿಣಾಮಕಾರಿಯಾಗಿದೆ. ಜನರು ಕೂಡ ಇದಕ್ಕೆ ಸ್ಪಂದಿಸುತ್ತಿದ್ದಾರೆ. ಜೂನ್ 8 ರಂದು ಮುಂದಿನ ಕ್ರಮಗಳ ಬಗ್ಗೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.












