ಬೆಂಗಳೂರು: ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರ ಜಟಾಪಟಿಗೆ ರಾಜ್ಯ ಸರ್ಕಾರ ತಾರ್ಕಿಕ ಅಂತ್ಯ ಹಾಡಿದ್ದು, ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಧಾರ್ಮಿಕ ದತ್ತಿ ಇಲಾಖೆಗೆ ರೋಹಣಿ ಸಿಂಧೂರಿ:
ಮೂಲಗಳ ಪ್ರಕಾರ ಮೈಸೂರು ಡಿಸಿಯಾಗಿದ್ದ ರೋಹಣಿ ಸಿಂಧೂರಿ ಅವರನ್ನು, ಅವರು ಈ ಹಿಂದೆ ಇದ್ದ ಧಾರ್ಮಿಕ ದತ್ತಿ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ವಾಣಿಜ್ಯ ತೆರಿಗೆ ಇಲಾಖೆಯ (ಜಾರಿ) ಹೆಚ್ಚುವರಿ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಗೌತಮ್ ಬಗಾದಿ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಹಾಗೆಯೇ, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾನಾಗ್ ರನ್ನು ಆರ್ ಡಿಪಿಆರ್ ಇ ಆಯುಕ್ತರಾಗಿ ನೇಮಕ ಮಾಡಲಾಗಿದ್ದು, ಮೈಸೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ಲಕ್ಷ್ನೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಲಾಗಿದೆ.