ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ದಿನಾಂಕವನ್ನು ಸರ್ಕಾರ ಘೋಷಿಸಿದೆ.
ಆಗಸ್ಟ್ 28 ಮತ್ತು 29ರಂದು ಸಿಇಟಿ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಈ ಬಾರಿ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಸಿಇಟಿ ಪರೀಕ್ಷೆಯ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ವಿಷಯ 60 ಅಂಕಗಳ ಪರೀಕ್ಷೆ ಆಗಿರುತ್ತದೆ. ಮೊದಲ ದಿನ ಜೀವ ವಿಜ್ಞಾನ ಮತ್ತು ಗಣಿತ, ಎರಡನೇ ದಿನ ಭೌತ ವಿಜ್ಞಾನ ಮತ್ತು ರಸಾಯನ ವಿಜ್ಞಾನ ಪರೀಕ್ಷೆ ನಡೆಯಲಿದೆ. ಆಗಸ್ಟ್ 30ರಂದು ಪ್ರತ್ಯೇಕ ಕನ್ನಡ ಪರೀಕ್ಷೆ ನಡೆಯಲಿದೆ. ಸಿಇಟಿಗೆ ನೋಂದಣಿ ಜೂನ್ 15ರಿಂದ ಆರಂಭವಾಗಲಿದೆ ಎಂದರು.