ಉಡುಪಿ: ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಮುಖವಾಗುತ್ತಿದ್ದು, ಮತ್ತೆ ಸಂಪೂರ್ಣ ಲಾಕ್ಡೌನ್ ಮಾಡುವ ಅಗತ್ಯವಿಲ್ಲ. ಲಾಕ್ಡೌನ್ ಮುಂದುವರಿಸುವುದರಿಂದ ಜನರು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಾರೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಅಭಿಪ್ರಾಯಪಟ್ಟಿದ್ದಾರೆ.
ಕೆಲವೊಂದು ನಿಬಂಧನೆಗಳೊಂದಿಗೆ ಜೀವನ ನಿರ್ವಹಣೆಗೆ ಅವಕಾಶ ಕೊಡಬೇಕು. ಸದ್ಯ ಧಾರ್ಮಿಕ, ಸಾಮಾಜಿಕ, ರಾಜಕೀಯ ಕಾರ್ಯಕ್ರಮಗಳಿಗೆ ನೀಡಬಾರದು. ಕನಿಷ್ಠ ಮೂರು ತಿಂಗಳು ಈ ಚಟುವಟಿಕೆಗಳು ಬಂದ್ ಆಗಬೇಕು ಎಂದರು.
ಗೂಡಾಂಗಡಿ, ಹೋಟೆಲ್, ಸಣ್ಣಪುಟ್ಟ ವ್ಯಾಪಾರಸ್ಥರಿಗೆ ಅವಕಾಶ ಕೊಡಬೇಕು. ಜೂನ್ 14 ನಂತರವೂ ಲಾಕ್ಡೌನ್ ಮುಂದುವರೆದರೆ ಆರ್ಥಿಕ ಸಂಕಷ್ಟವಾಗುತ್ತದೆ. ಹೀಗಾಗಿ ಜೂ.14 ನಂತರ ಲಾಕ್ಡೌನ್ ವಾಪಸ್ ಪಡೆಯುವಂತೆ ಸಿಎಂ ಯಡಿಯೂರಪ್ಪಗೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.