ಬೆಂಗಳೂರು: ಅಪಘಾತಕ್ಕೀಡಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ನ್ಯೂರೋ ಸರ್ಜನ್ ಡಾ. ಅರುಣ್ ನಾಯಕ್ ತಿಳಿಸಿದ್ದಾರೆ.
ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಚಿಂತಾಕನಕವಾಗ್ತಿದೆ. ರಿಕವರಿ ಚಾನ್ಸ್ ಕಡಿಮೆ ಇದೆ. ಈ ವಿಷಯವನ್ನ ವಿಜಯ್ ಅವರ ಕುಟುಂಬಕ್ಕೆ ಈಗಾಗಲೇ ತಿಳಿಸಿದ್ದೇನೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಶನಿವಾರ ರಾತ್ರಿ ಅಪಘಾತಕ್ಕೀಡಾದ ನಟ ಸಂಚಾರಿ ವಿಜಯ್ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಮೆದುಳಿನ ಬಲ ಭಾಗ ಗಾಯವಾಗಿದ್ದು ಹಾಗೂ ಬಲ ತೊಡೆ ಮೂಳೆ ಮುರಿದಿದೆ ಎಂದು ತಿಳಿದುಬಂದಿದೆ.