ಬೆಂಗಳೂರು: ಕೋವಿಡ್ -19 ಮಹಾಮಾರಿಯಿಂದ ಮೃತಪಟ್ಟ ವ್ಯಕ್ತಿಗಳ ಕುಟುಂಬಕ್ಕೆ ₹ 1ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಇಂದು ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದರು. ಕೋವಿಡ್ ನಿಂದ ಮೃತಪಟ್ಟವರ ಕುಟುಂಬಗಳು ಬಹಳಷ್ಟು ಸಂಕಷ್ಟಕ್ಕೆ ತುತ್ತಾಗಿದ್ದು, ಹೀಗಾಗಿ ಬಿಪಿಎಲ್ ಕುಟುಂಬಗಳಿಗೆ ಒಂದು ಲಕ್ಷ ರೂ ಪರಿಹಾರ ನೀಡಲು ನಿರ್ಧರಿಸಿದ್ದೇವೆ ಎಂದರು.
ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಲ್ಲಿ ಕೊರೊನಾದಿಂದ ವಯಸ್ಕರು ಮೃತಪಟ್ಟಿದ್ದರೆ, ಒಂದು ಕುಟುಂಬಕ್ಕೆ ಒಬ್ಬರಂತೆ ಒಂದು ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದರು.