ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆ ನೀಡಿದೆ. ಈ ಬಗ್ಗೆ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ಮಧ್ಯಂತರ ತಡೆ ನೀಡಿದೆ.
ರಿಪೀಟರ್ಸ್ ಗೆ ಪರೀಕ್ಷೆ ನಡೆಸುವ ಬಗ್ಗೆ ಆಕ್ಷೇಪಿಸಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಈ ಬಗ್ಗೆ ವರದಿ ನೀಡುವಂತೆ ನ್ಯಾಯಾಲಯವು ಸರ್ಕಾರಕ್ಕೆ ಸೂಚನೆ ನೀಡಿತ್ತು. ತಜ್ಞರ ಸಮಿತಿ ರಚಿಸಿರುವುದಾಗಿ ಸರ್ಕಾರ ಹೇಳಿದೆ.
5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಮತ್ತು 76 ಸಾವಿರ ರಿಪೀಟರ್ಸ್ ಗಳ ಫಲಿತಾಂಶದ ಬಗ್ಗೆ ತಜ್ಞರ ಸಮಿತಿ ಸಲಹೆ ಆಧರಿಸಿ ಸರ್ಕಾರ ತೀರ್ಮಾನಿಸಲಿದೆ.
15 ದಿನಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಸರ್ಕಾರ ಹೇಳಿದೆ. ಈ ತೀರ್ಮಾನದವರೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಮಾಡಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ.

















