ಡಿಸೆಂಬರ್ ವರೆಗೆ ಜಿಪಂ, ತಾಪಂ ಚುನಾವಣೆ ನಡೆಸಲ್ಲ: ಈಶ್ವರಪ್ಪ

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿದ್ದರೂ ಮೂರನೇ ಅಲೆ ಅಪ್ಪಳಿಸುವ ಭೀತಿ ಇದೆ. ಹೀಗಾಗಿ ಡಿಸೆಂಬರ್‌ ವರೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಸಂಜೆ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದೆ. ಅಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.