ಉಡುಪಿ: ಉಡುಪಿ ಜಿಲ್ಲೆಯನ್ನು ಅನ್ ಲಾಕ್ ಮಾಡುವಂತೆ ಮುಖ್ಯಮಂತ್ರಿ ಹಾಗೂ ಸರ್ಕಾರ ಮುಖ್ಯ ಕಾರ್ಯದರ್ಶಿ ಬಳಿ ಮನವಿ ಮಾಡುತ್ತೇನೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಜಿಲ್ಲೆಯ ಆರ್ಥಿಕ ವಹಿವಾಟು ಸಂಪೂರ್ಣ ಸ್ಥಗಿತಗೊಂಡಿದೆ. ಜಿಲ್ಲೆಯ ವರ್ತಕರು ಹಾಗೂ ಸಾರ್ವಜನಿಕರು ಅನ್ ಲಾಕ್ ಮಾಡುವಂತೆ ಕೇಳಿಕೊಂಡಿದ್ದಾರೆ. ಹಾಗಾಗಿ ಜಿಲ್ಲೆಯನ್ನು ಅನ್ ಲಾಕ್ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನಿನ್ನೆ ಕರೆ ಮಾಡಿ ವಿನಂತಿ ಮಾಡಿಕೊಂಡಿದ್ದೆ. ಅವರು ಜಿಲ್ಲೆಯ ಹೆಲ್ತ್ ಬುಲೆಟಿನ್ ತರಿಸಿಕೊಂಡು ಪರಿಶೀಲನೆ ಮಾಡುತ್ತೇನೆ ಎಂದಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ಇಳಿಮುಖವಾಗುತ್ತಿದೆ. ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಬೇಕಾದಷ್ಟು ಆಸ್ಪತ್ರೆ, ಬೆಡ್, ವೆಂಟಿಲೇಟರ್ ಗಳಿವೆ. ಯಾರಿಗೂ ಸಮಸ್ಯೆಯಾದರೂ ಒದಗಿಸುವ ಸಾಮರ್ಥ್ಯ ನಮ್ಮಲ್ಲಿದೆ. ಹಾಗಾಗಿ ಈವರೆಗೆ ಬೆಡ್, ವೆಂಟಿಲೇಟರ್ ಇಲ್ಲದೆ ಮೃತಪಟ್ಟಿರುವ ಕೇಸ್ ಗಳಿಲ್ಲ. ಆದ್ದರಿಂದ ಜಿಲ್ಲೆಯಲ್ಲಿ ಲಾಕ್ ಡೌನ್ ಅನ್ನು ಪೂರ್ತಿಯಾಗಿ ತೆಗೆದುಹಾಕಬೇಕೆಂದು ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ನಿನ್ನೆ ಮನವಿ ಮಾಡಿದ್ದೇನೆ. ಈಗ ಮತ್ತೊಮ್ಮೆ ಮಾಡುತ್ತೇನೆ ಎಂದರು.