ಉಡುಪಿ: ವಿಮಾ ಸಪ್ತಾಹ ಅಂಗವಾಗಿ ಸಂಜೀವಿನಿ ಮತ್ತು ಇತರೆ ಎಲ್ಲಾ ಸ್ವಸಹಾಯ ಗುಂಪುಗಳ ಸದಸ್ಯರಿಗೆ, ಉದ್ಯೋಗ ಖಾತರಿ ಯೋಜನೆಯ ಕೂಲಿ ಕಾರ್ಮಿಕರಿಗೆ, ಸ್ವಚ್ಛತಾ ಕಾರ್ಯಕರ್ತರಿಗೆ ಹಾಗೂ ಅದರ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನಜ್ಯೋತಿ ವಿಮಾ ಯೋಜನೆಗಳನ್ನು ಮಾಡಿಸಲು ಉದ್ದೇಶಿಸಲಾಗಿದೆ.
ಜಿಲ್ಲೆಯ ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಪಂ ಮತ್ತು ಬ್ಯಾಂಕ್ ಗಳ ಸಹಯೋಗದಲ್ಲಿ ಇದೇ ಜೂನ್ 24 ಮತ್ತು 25ರಂದು ಸ್ಥಳದಲ್ಲಿಯೇ ವಿಮೆ ಮಾಡಿಸುವ ಶಿಬಿರವನ್ನು ಆಯೋಜಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರು ಆಯಾ ಗ್ರಾಮ ಪಂಚಾಯತ್ ಗಳನ್ನು ಸಂಪರ್ಕಿಸಿ, ಈ ಶಿಬಿರಗಳ ಸದುಪಯೋಗ ಪಡೆಯಲು ಕೋರಲಾಗಿದೆ.