ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಈ ಬಗ್ಗೆ ವಿಕಾಸಸೌಧದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆಯ ಬಗ್ಗೆ ಸರ್ಕಾರ ಅಂತಿಮ ನಿರ್ಧಾರ ಪ್ರಕಟಿಸಲಿದೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ ಒಂದು ಗಂಟೆಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರೀಕ್ಷೆಯ ನಿರ್ಧಾರವನ್ನು ಪ್ರಕಟಿಸಲಿದ್ದಾರೆ.