ಕಾರ್ಕಳ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಡಮಾಡುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಕಾರ್ಕಳ ವಿಜೇತ ವಿಶೇಷ ಶಾಲೆಯ ಸಂಸ್ಥಾಪಕಿ ಡಾ. ಕಾಂತಿ ಹರೀಶ್ ಅವರು ಪುರಸ್ಕೃತರಾಗಿದ್ದಾರೆ.
ಇಲಾಖೆಯ ವತಿಯಿಂದ ಮಾ. 8ರಂದು ರವೀಂದ್ರ ಕಲಾ ಕ್ಷೇತ್ರ ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಡಾ. ಜಯಮಾಲ ರಾಮಚಂದ್ರ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಿದರು.