ಉಡುಪಿ: ಬಿಜೆಪಿ ನಗರ ಮಹಿಳಾ ಮೋರ್ಚಾದ ಕಡಿಯಾಳಿ ಮಹಾಶಕ್ತಿ ಕೇಂದ್ರದ ವತಿಯಿಂದ ಕಡಿಯಾಳಿಯ ಕಮಲ ಬಾಯಿ ಹೈಸ್ಕೂಲ್ ನಲ್ಲಿ ಇಂದು ವೃಕ್ಷಾರೋಪಣ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ.ಟೆಂಗಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ , ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ, ಕಡಿಯಾಳಿ ಮಹಿಳಾ ಮೋರ್ಚಾದ ಮಹಾಶಕ್ತಿ ಕೇಂದ್ರದ ಅಧ್ಯಕ್ಷೆ ಉಮಾ ಹರಿ, ಕಾರ್ಯದರ್ಶಿ ಚಂದ್ರಿಕಾ ನಾಯಕ್.

ಕಡಿಯಾಳಿ ವಾರ್ಡ್ ನ ನಗರಸಭಾ ಸದಸ್ಯೆ ಗೀತಾ ಶೇಟ್, ಬನ್ನಂಜೆ ವಾರ್ಡ್ನ ನಗರ ಸಭಾ ಸದಸ್ಯೆ ಸವಿತಾ ಹರೀಶ್ ರಾಮ್, ನಗರ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಸರೋಜ ಶೆಣೈ, ಪ್ರಧಾನ ಕಾರ್ಯದರ್ಶಿ ಸುಧಾ ಪೈ, ಸುಜಲ ಸತೀಶ್, ಕಾರ್ಯದರ್ಶಿ ಲೈಲಾ, ಶಾಲಾ ಮುಖ್ಯೋಪಾಧ್ಯಾಯರು, ಶಾಲಾ ಶಿಕ್ಷಕ ವೃಂದದವರು, ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯರು, ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರದ ಸದಸ್ಯರು ಭಾಗವಹಿಸಿದ್ದರು.

















